
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲಾ (ಗ್ರಾಮೀಣ ಮತ್ತು ನಗರ) ಕಾಂಗ್ರೆಸ್ ಸಮಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ “ಕಾಂಗ್ರೆಸ್ ಗ್ಯಾರಂಟಿ” ಕರಪತ್ರಗಳ ವಿತರಣಾ ಕಾರ್ಯಕ್ರಮವನ್ನು ರವಿವಾರ ಮಧ್ಯಾಹ್ನ 2 ಗಂಟೆಗೆ ಬೆಳಗಾವಿ “ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕರ್ನಾಟಕದ ಉಸ್ತುವಾರಿಗಳೂ ಆದ ರಣದೀಪ್ ಸುರ್ಜೇವಾಲಾ ಉಪಸ್ಥಿತರಿರುವರು. ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿಗಳು, ಬೆಳಗಾವಿ ವಿಭಾಗದ ಉಸ್ತುವಾರಿಗಳಾದ ಪಿ. ಸಿ. ವಿಷ್ಣುನಾದರವರು ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹ್ಮದರವರು ಹಾಗೂ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿರುವರು.
ಈ ಸಭೆಗೆ 2018 ಹಾಗೂ 2019ರ ವಿಧಾನಸಭಾ ಅಭ್ಯರ್ಥಿಗಳು, ವಿಧಾನ ಪರಿಷತ್ ಅಭ್ಯರ್ಥಿಗಳು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಉಸ್ತುವಾರಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, 2023ರ ಆಕಾಂಕ್ಷಿಗಳು, ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮಂಚೂಣಿ ಘಟಕಗಳ ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿ ಕೋ-ಆರ್ಡಿನೇಟರ್ ಗಳು, ಮಹಾನಗರ ಪಾಲಿಕ ಸದಸ್ಯರು ಮತ್ತು ಅಭ್ಯರ್ಥಿಗಳು ಜಿಲ್ಲಾ/ತಾಲೂಕ ಪಂಚಾಯತ ಮಾಜಿ ಸದಸ್ಯರು ಮತ್ತು ಪಕ್ಷದ ಅಭ್ಯರ್ಥಿಗಳು, ಗ್ರಾಮ ಪಂಚಾಯತ ಅಧ್ಯಕ್ಷರು, ಹಾಗೂ ಪ್ರಮುಖ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿದೆ.
ಶಿವರಾತ್ರಿ ನಿಮಿತ್ತ ವಿವಿಧೆಡೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ
https://pragati.taskdun.com/lakshmi-hebbalkar-channaraja-hattiholi-offered-puja-at-various-places-on-the-occasion-of-shivratri/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ