Kannada NewsLatest

ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ವಿರುದ್ಧ ಬೆಳಗಾವಿಯಲ್ಲಿ FIR ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಚನ್ನಪಟ್ಟಣದ ಮೂಲದ ನವ್ಯಶ್ರೀ ರಾಮಚಂದ್ರರಾವ್ ವಿರುದ್ಧ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ.

Home add -Advt

 

ಶ್ರೀಮಂತ್ ಪಾಟೀಲ್ ಸಚಿವರಾಗಿದ್ದಾಗ ಅವರನ್ನು ಭೇಟಿಯಾಗಲು ಬಂದಿದ್ದ ನವ್ಯಶ್ರೀ ರಾಮಚಂದ್ರರಾವ್, ರಾಜಕುಮಾರ್ ಅವರಿಗೆ ಪರಿಚಯವಾಗಿ ಇಬ್ಬರ ನಡುವೆ ಸ್ನೇಹವಿತ್ತು. ಬಳಿಕ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ನವ್ಯಶ್ರೀ ಅವರು ರಾಜಕುಮಾರ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ರಾಜಕುಮಾರ್ ವಿರುದ್ಧ ವಂಚನೆ ಆರೋಪ ಕೂಡ ಮಾಡಿದ್ದರು. ಈ ವೇಳೆ ರಾಜಿ ಸಂಧಾನ ನಡೆದು ಪ್ರಕರಣ ಕೈಬಿಡಲಾಗಿತ್ತು.

ಆದರೆ ಇದೀಗ ರಾಜಕುಮಾರ್ ಟಾಕಳೆ, ನವ್ಯಶ್ರೀ ವಿರುದ್ಧವೇ ದೂರು ದಾಖಲಿಸಿದ್ದು, 2 ಲಕ್ಷ ರೂಪಾಯಿ ಹಣ ಪಡೆದಿದ್ದಾಗಿ ಹಾಗೂ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಭಯಂಕರ ಶಬ್ಧದೊಂದಿಗೆ ಕುಸಿದ ಭೂಮಿ; ಕೊಚ್ಚಿ ಬಂದ 5 ಎಕರೆ ಭೂ ಪ್ರದೇಶ

Related Articles

Back to top button