Belagavi NewsBelgaum News

*ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತೆಯರ ಗಲಾಟೆ: ವೇದಿಕೆಯತ್ತ ಮುನ್ನುಗ್ಗಲು ಯತ್ನಿಸಿದವರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ನಡೆಸುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರು ಸಮಾವೇಶಕ್ಕೆ ನುಗ್ಗಿ ಗಲಾಟೆ ಮಾಡಿದ ಘಟನೆ ನಡೆಯಿತು.

ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿಯ ಕೆಲ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರಂತೆ ಸಮಾವೇಶದ ಹಿಂದಿನ ಸಾಲಿನಲ್ಲಿ ಕುಳಿತಿದ್ದರು. ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಕಪ್ಪು ಪಟ್ಟಿ ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ವೇದಿಕೆಯತ್ತ ಮುನ್ನುಗ್ಗಲು ಯತ್ನಿಸಿದರು.

ಬಿಜೆಪಿಯ ಕೆಲ ಮಹಿಳಾ ಕಾರ್ಯಕರ್ತಯರ ಈ ವರ್ತನೆಗೆ ಕೆಲ ಕಾಲ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣ ಅರ್ಧಕ್ಕೆ ನಿಲ್ಲಿಸಿ ಪೊಲೀಸರ ವಿರುದ್ಧ ಗರಂ ಆದರು. ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತೆಯರು ಬಂದು ಗಲಾಟೆ ನಡೆಸುತ್ತಿದ್ದರೂ ಸುಮ್ಮನಿರುವುದೇಕೆ ಎಂದು ಕಿಡಿಕಾರಿದರು. ತಕ್ಷಣ ಗಲಾಟೆ ನಿಲ್ಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನು ಸಮಾವೇಶ ಸ್ಥಳದಿಂದ ಹೊರ ಕರೆತಂದ ಪೊಲೀಸರು ಬಳಿಕ ಅವರನ್ನು ವಶಕ್ಕೆ ಪಡೆದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button