ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಡಿಸೆಂಬರ್ 26, 27ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಮತ್ತಿತರರ ಜೊತೆ ಸೇರಿ ಮೈದಾನಲ್ಲಿನ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.
ನಂತರ ವೀರಸೌಧ, ಬೆಳಗಾಂ ಕ್ಲಬ್ ಮತ್ತಿತರ ಸ್ಥಳಗಳ ಪರಿಶೀಲನೆಯನ್ನು ಸಹ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಗಣೇಶ ಹುಕ್ಕೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ