
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತರಾದ ಕಿರಣ್ ರಜಪೂತ ಹಾಗೂ ಭರಮ ಧೂಪದಾಳ್ ಮೇಲೆ ಅಪರಿಚಿತರು ಮಾಸ್ಕ್ ಧರಿಸಿಬಂದು 7 ಅಡಿ ದೂರದಿಂದ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಚಟುವಟಿಕೆ ಗರಿಗೆದರಿದ ಬೆನ್ನಲ್ಲೇ ಹಳೇ ವೈಷಮ್ಯದಿಂದ ದಾಳಿ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಭರಮಾ ಧೂಪದಾಳ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ