Kannada NewsLatest
ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ಕೂಡ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸುವ ಕ್ರಮ ಖಂಡಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಪ್ರತಿಭಟನಾ ನಿರತರು, ರಾಜ್ಯ ಸರ್ಕಾರ ಯೂನಿಟ್ ಗೆ 40 ಪೈಸೆಯಂತೆ ವಿದ್ಯುತ್ ದರ ಹೆಚ್ಚಿಸಿರುವುದು ಖಂಡನೀಯ. ಕೊರೊನಾದಿಂದಾಗಿ ರಾಜ್ಯದ ಜನರು ಹಿಂದೆಂದೂ ಕಂಡು ಕೇಳರಿಯದಷ್ಟು ಆರ್ಥಿಕ ಸಂಕಷ್ಟಕ್ಕೀಡಾಗಿದ್ದು, ಇಂತಹ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಅಕ್ಷ್ಯಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.


