
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗುತ್ತಿಗೆದಾರನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಬೇಸತ್ತು ಅಧಿಕಾರಿಗಳ ಮುಂದೆಯೇ ಗುತ್ತಿಗೆದಾರ ನಾಗಪ್ಪ ಬಂಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಸ್ವಸ್ಥನಾಗಿದ್ದ ನಾಗಪ್ಪ ನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.