Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಗುತ್ತಿಗೆದಾರನಿಂದ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಶಾಲಾ ಕಟ್ಟದ ಕಾಮಗಾರಿ ಮುಗಿದರೂ ಬಾಕಿ ಬಿಲ್ ಪಾವತಿಸಿಲ್ಲ ಎಂದು ಮನನೊಂದ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.

ಗುತ್ತಿಗೆದಾರ ರಾಮಣ್ಣ ಅಡಿವೆಪ್ಪ ಆತ್ಮಹತ್ಯೆಗೆ ಯತ್ನಿಸಿದವರು. ಗೋಕಾಕ್ ನ ಬೆಣಚಿನಮರಡಿಯಲ್ಲಿ ಈ ಘಟನೆ ನಡೆದಿದೆ. ಶಾಲಾ ಕಟ್ಟಡದ ಕಾಮಗಾರಿ ಮುಗಿದರೂ ಬಾಕಿ ಬಿಲ್ ಪಾವತಿಸಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರ ರಾಮಣ್ಣ ಅದೇ ಶಾಲೆಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Home add -Advt

2018ರಲ್ಲಿ ಪ್ರೌಢಶಾಲಾ ಕಟ್ಟಡ ಕಾಮಗಾರಿ ಕೈಗೊಂಡಿದ್ದ ರಾಮಣ್ಣ ಎನ್ ಸಿಸಿ ಕಂಪನಿ ಬಿಲ್ ಬಾಕಿ ಉಳಿಸಿಕೊಂಡಿದೆ. ಕಟ್ಟಡ ಕಾಮಗಾರಿ ಮುಗಿದರೂ ಬಾಕಿ ಬಿಲ್ ಪಾವತಿ ಮಾಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.


Related Articles

Back to top button