Kannada NewsLatest

ಕುಂದಾನಗರಿಗೆ ಇಂದು ಕೊರೊನಾಘಾತ…?

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉಪಚುನಾವಣೆ ಮುಗಿದ ಬೆನ್ನಲ್ಲೇ ಗಡಿಜಿಲ್ಲೆ ಬೆಳಗಾವಿಗೆ ಕೊರೊನಾ ಆತಂಕ ಶುರುವಾಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರ ಕೋವಿಡ್ ಟೆಸ್ಟ್ ವರದಿ ಇಂದು ಬರಲಿದೆ.

ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕೆಲ ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Home add -Advt

ಬೆಳಗಾವಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿಎಂ ಸಂಪರ್ಕಕ್ಕೆ ಬಂದ 500 ಜನರ ಗಂಟಲು ಧ್ರವ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿದ್ದು, ಇಂದು ಸಂಜೆ ವೇಳೆಗೆ ವರದಿ ಬರಲಿದೆ. ಈ ಹಿನ್ನೆಲೆಯಲ್ಲಿ ಕುಂದಾ ನಗರಿ ಬೆಳಗಾವಿಯಲ್ಲಿ ಆತಂಕ ಎದುರಾಗಿದೆ.

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ಕೊರೊನಾಗೆ ಬಲಿ

Related Articles

Back to top button