ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಲಾಗುತ್ತಿರುವ ಅದೆಷ್ಟೋ ದೃಶ್ಯಗಳನ್ನು ನೋಡಿದ್ದೇವೆ. ಈ ಬಗ್ಗೆ ರಾಜ್ಯ ಸರ್ಕಾರ ಕೂಡ ಹಲವುಭಾರಿ ಅಸಮಾಧಾನ ವ್ಯಕ್ತಪಡಿಸಿದ್ದು, ಮಾನವೀಯ ದೃಷ್ಟಿಯಿಂದ ಅಂತ್ಯಸಂಸ್ಕಾರ ಮಾಡುವಂತೆ ಸೂಚಿಸಿದೆ. ಆದಾಗ್ಯೂ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿಯ ಸದಾಶಿವ ನಗರ ಸ್ಮಶಾನದಲ್ಲಿ ಕೊರೊನಾ ಸೋಂಕಿತ ಮೃತದೇಹಗಳನ್ನು ಚಿತೆ ಮೇಲೆ ಎಸೆದು ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ. ಒಂದೇ ಅಂಬುಲೆನ್ಸ್‌ನಲ್ಲಿ ಎರಡು ಮೃತದೇಹವನ್ನು ತಂದಿದ್ದಾರೆ. ನಂತರ ಆ ಶವಗಳನ್ನ ಚಿತೆಯ ಮೇಲೆ ಸಿಬ್ಬಂದಿ ಅಮಾನವೀಯವಾಗಿ ಎಸೆದು ಅಂತ್ಯಕ್ರಿಯೆ ಮಾಡಿದ್ದಾರೆ.
ಅಲ್ಲದೇ ಸ್ಮಶಾನದ ಅಕ್ಕಪಕ್ಕದಲ್ಲಿ ಮನೆಗಳಿದ್ದರೂ ಹೊರ ಭಾಗದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ. ಅಲ್ಲದೇ ಸ್ಮಶಾನ ಕಾವಲುಗಾರರು ಮತ್ತು ವಾಹನ ಚಾಲಕರ ಬಗ್ಗೆಯೂ ಪಾಲಿಕೆ ನಿರ್ಲಕ್ಷ್ಯವಹಿಸಿದೆ. ಸೋಂಕಿತರ ಅಂತ್ಯಕ್ರಿಯೆ ವೇಳೆ ಸ್ಮಶಾನ ಕಾವಲುಗಾರ ಸಿಬ್ಬಂದಿಗಳಿಗೆ ಪಿಪಿಇ ಕಿಟ್ ನೀಡಬೇಕು ಎಂಬ ಸರ್ಕಾರದ ಆದೇಶವಿದ್ದರೂ ಮಹಾನಗ ಪಾಲಿಕೆ ಬೇಜವಾಬ್ದಾರಿ ತೋರಿದೆ. ಈ ವಿಡಿಯೋ ಭಾರೀ ವೈರಲ್ ಅಗಿದ್ದು, ಪಾಲಿಕೆ ನಿರ್ಲಕ್ಷಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ