Kannada News

ಬೆಳಗಾವಿಗೂ ಕಾಲಿಟ್ಟ ಕೊರೋನಾ ಸೋಂಕು – ಮೂವರಿಗೆ ಪಾಸಿಟಿವ್

https://youtu.be/2yGbLDa_iBc

ಪ್ರಗತಿವಾಹಿನಿ ಸುದ್ದಿ; ಧಾರವಾಡ: ರಾಜ್ಯದಲ್ಲಿ ದಿನ ದಿನಕ್ಕೂ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಮೂವರಿಗೆ ಕೊರೊನ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಸಚಿವರು, ದೆಹಲಿಯ ನಿಜಾಮುದ್ದೀನ್ ಸಭೆಯಲ್ಲಿ ಭಾಗವಹಿಸಿ ಬೆಳಾಗಾವಿಗೆ ಆಗಮಿಸಿದ್ದ ಮೂವರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕಿತರು ಮೂರರಿಂದ ನಾಲ್ಕು ದಿನ ಪ್ರಾರ್ಥನೆಯಲ್ಲೂ ಭಾಗಿಯಾಗಿದ್ದರು ಎಂದು ತಿಳಿಸಿದ್ದಾರೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಯಾಲ್ಲಿ ಸೊಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರು ಇರುವ ಸ್ಥಳವನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.

Home add -Advt

ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಅಗಿದ್ದು, ಗ್ರಾಮ ಪಂಚಾಯ್ತಿ ವತಿಯಿಂದ ಗ್ರಾಮಗಳಲ್ಲಿ ಯಾರೂ ಕೂಡ ಮನೆಯಿಂದ ಹೊರಬರದಾಂತೆ ಘೋಷಣೆ ಮಾಡಲಾಗುತ್ತಿದೆ. ಇನ್ನು ನಗರ ಹಾಗೂ ತಾಲೂಕಿನಾದ್ಯಂತ ಮನೆಗಳಿಗೆ ಔಷಧ ಸಿಂಪಡಣೆ ಮಾಡಲಾಗುತ್ತಿದೆ.

ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗುತ್ತಿದೆ.

Related Articles

Back to top button