
ಪ್ರಗತಿವಾಹಿನಿ ಸುದ್ದಿ: ಅಥಣಿ ಹೊರವಲಯದ ತೋಟದ ಮನೆಯೊಂದರಲ್ಲಿ ದಂಪತಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ನಾನಾ ಸಾಹೇಬ್ ಬಾಬು ಚೌವ್ಹಾಣ್ (58) ಹಾಗೂ ಜಯಶ್ರೀ ನಾನಾ ಸಾಹೇಬ್ ಚೌವ್ಹಾಣ್ (50) ಮೃತ ದಂಪತಿ. ಅಥಣಿ ಹೊರವಲಯದ ಮಾದಭಾವಿ ರಸ್ತೆ ಬಳಿಯ ಚೌವ್ಹಾಣ್ ತೋಟದ ಮನೆಯಲ್ಲಿ ದಂಪತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆರೆದು ನೋಡಿದಾಗ ದಂಪತಿ ಶವ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.
ಐದಾರು ದಿನಗಳ ಹಿಂದೆಯೇ ಪತಿ-ಪತ್ನಿ ಇಬ್ಬರೂ ಸಾವನಪ್ಪಿರುವ ಶಂಕೆ ಇದೆ. ಇದು ಕೊಲೆಯೋ? ಆತ್ಮಹತ್ಯೆಯೋ? ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ