ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಲಿ ಕೋವಿಡ್ ಹೈ ರಿಸ್ಕ್ ದೇಶಗಳಿಂದ ಬಂದಿರುವ 12 ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಯೂ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮುಂಜಾಗೃತಾ ಕ್ರಮವಾಗಿ ಖಡಕ್ ನಿಯಮಗಳ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕೊರೊನಾ ಸೋಂಕಿನ ಬಗ್ಗೆ ಜನರು ಮುನ್ನೆಚ್ಚರಿಕೆ ವಹಿಸಬೇಕು. ಆತಂಕ ಪದುವ ಅಗತ್ಯವಿಲ್ಲ ಆದರೆ ಜಾಗೃತಿ ವಹಿಸಬೇಕಾಗ ಅಗತ್ಯವಿದೆ. ಮುಂಜಾಗೃತಾ ಕ್ರಮವಾಗಿ ಈಗಿರುವ ನಿಯಮಗಳ ಜೊತೆ ಹೊಸ ನಿಯಮಗಳನ್ನು ಸೇರಿಸಲಾಗುವುದು ಎಂದರು.
ಹೊಸ ವರ್ಷಾಚರಣೆಗೆ ಈಗಿನ ನಿಯಮಗಳ ಜೊತೆ ಇನ್ನೊಂದಿಷ್ಟು ನಿಯಮಗಳನ್ನು ಸೇರಿಸಿ ಗೈಡ್ ಲೈನ್ ಜಾರಿಗೊಳಿಸಲಾಗುವುದು. ಈಗಾಗಲೇ ಏರ್ ಪೋರ್ಟ್ ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜನಸಾಮಾನ್ಯರಿಗೆ, ವ್ಯಾಪಾರ-ವಹಿವಾಟಿಗೆ ಯಾವುದೇ ಸಮಸ್ಯೆಗಳಾಗದಂತೆ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೊಸ ವರ್ಷ ಆಚರಣೆ :
ಹೊಸ ವರ್ಷಕ್ಕೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸುವ ಬಗ್ಗೆ ಉತ್ತರಿಸಿ, ಪ್ರತಿ ಬಾರಿಯಂತೆ ಈ ವರ್ಷವೂ ನಿಯಮಗಳಿದ್ದು, ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೇರಿಸಲಾಗುವುದು. ಜನಸಾಮಾನ್ಯರ ದೈನಂದಿನ ಚಟುವಟಿಕೆ, ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜಾರಿ ಮಾಡಲಾಗುವುದು ಎಂದರು.
ಬೆಳಗಾವಿ ಅಧಿವೇಶನ ಫಲಪ್ರದ ಹಾಗೂ ಅರ್ಥಪೂರ್ಣವಾಗಬೇಕು :
ಬೆಳಗಾವಿಯಲ್ಲಿನ ಅಧಿವೇಶನ ಫಲಪ್ರದ ಹಾಗೂ ಅರ್ಥಪೂರ್ಣವಾಗಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತುಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು. ವಿರೋಧಪಕ್ಷಗಳು ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಿವೆ. ಯಾವ ವಿಚಾರವೇ ಆಗಲಿ ಚರ್ಚಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದರು.
ಇಂದು ನವದೆಹಲಿಗೆ ಪ್ರಯಾಣ- ಪಕ್ಷದ ವರಿಷ್ಠರೊಂದಿಗೆ ಚರ್ಚೆ :
ಇಂದು ನವದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ. ಕಳೆದ ಬಾರಿ ಕೆಲವೊಂದು ವಿಷಯಗಳ ಚರ್ಚೆ ಅಪೂರ್ಣವಾಗಿದ್ದರಿಂದ ಪುನ: ಕರೆದಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಸಭೆಯನ್ನು ಕರೆದಿದ್ದಾರೆ. ಪಕ್ಷದ ಮುಖಂಡರು, ಕೇಂದ್ರ ಗೃಹ ಸಚಿವರು ಸಭೆಯಲ್ಲಿ ಉಪಸ್ಥಿತರಿದ್ದು, ಚುನಾವಣಾ ತಯಾರಿ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲ ವಿಚಾರಗಳನ್ನು ಚರ್ಚಿಸಲಾಗುವುದು. ಈ ಸಭೆಯಲ್ಲಿ ಭಾಗವಹಿಸಿ ನಾಳಿನ ಅಧಿವೇಶನಕ್ಕೆ ವಾಪಸ್ಸು ಬರಲಿದ್ದೇನೆ. ಸಚಿವ ಸಂಪುಟ ವಿಸ್ತರಣೆ, ಖಾಲಿ ಸಚಿವ ಸ್ಥಾನ ಭರ್ತಿ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ ಎಂದರು.
ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ:
ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು. ಕೇಂದ್ರ ನೀರಾವರಿ ಸಚಿವರ ಭೇಟಿಗೆ ಸಮಯ ಕೇಳಲಾಗಿದ್ದು, ನೀರಾವರಿಯ ನಾಲ್ಕೈದು ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು
*9 ಅಲ್ಲ, 12 ಪ್ರಯಾಣಿಕರಲ್ಲಿ ಕೊರೊನಾ ದೃಢ*
https://pragati.taskdun.com/bangalore12-positive-casesdr-sudhakar/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ