ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಮಾರ್ಗಸೂಚಿ ಪ್ರಕಣವಾಗಿರುವ ಬೆನ್ನಲ್ಲೇ ನೈರುತ್ಯ ರೈಲ್ವೆ ಇಲಾಖೆ ಕೂಡ ಹೊಸ ಗೈಡ್ ಲೈನ್ಸ್ ಪ್ರಕಟಿಸಿದೆ.
ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಹಾಗೂ ಹೋಗುವ ಪ್ರಯಾಣಿಕರು ಲಸಿಕೆ ಪಡೆಯಲಿ ಪಡೆಯದಿರಲಿ 72 ಗಂಟೆ ಒಳಗಿನ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಹೊಂದಿರಲೇಬೇಕು. ರೈಲು, ಬಸ್ ಹಾಗೂ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಕಡ್ಡಾಯ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜಿಲ್ಲಾಡಳಿತ ತಪಾಸಣಾ ಕೇಂದ್ರಗಳನ್ನು ತೆರೆದು ಪ್ರಯಾಣಿಕರ ಪರಿಶೀಲನೆ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ