ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪುಣೆಯ ಸೀರಮ್ ಇನ್ಸ್ ಟಿಟ್ಯೂಟ್ ತಯಾರಿಸಿರುವ ಕೊರೊನಾ ಲಸಿಕೆ ಕೋವಿಶೀಲ್ಡ್ ಇದೀಗ ಕುಂದಾನಗರಿ ಬೆಳಗಾವಿಗೆ ಬಂದು ತಲುಪಿದೆ.
ಎರಡನೇ ಸುತ್ತಿನ ಲಸಿಕೆ ಜನವರಿ 13ರಂದು ಬೆಳಗವೈಗೆ ಬಂದು ತಲುಪಿದೆ. ಪೊಲೀಸ್ ಎಸ್ಕಾರ್ಟ್ ನಲ್ಲಿ ಲಸಿಕೆ ಬಂದು ತಲುಪಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
1.47 ಲಕ್ಷ ಡೋಸ್ ಕೋವಿಶೀಲ್ಡ್ ವ್ಯಾಕ್ಸಿನ್ ಬಂದಿದ್ದು, 13 ಬಾಕ್ಸ್ ಗಳಲ್ಲಿ ಲಸಿಕೆ ಆಗಮಿಸಿದೆ. ಬೆಳಗಾವಿ ಜಿಲ್ಲೆಯ 12 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ. ಮೊದಲು 37 ಸಾವಿರ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗುವುದು. ಬಳಿಕ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ವಿತರಣೆ ಮಾಡಲಾಗುತ್ತದೆ. ಒಂದು ದಿನದಲ್ಲಿ ನೂರು ಜನರಿಗೆ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ