Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ; ಮೂವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮಗು ಸೇರಿ 7 ಜನರು ಗಂಭಿರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಲ್ ತಾಲೂಕಿನ ಅಕ್ಕತಂಗೇರಹಾಳದಲ್ಲಿ ನಡೆದಿದೆ.

ಮನೆಯಲ್ಲಿರಾತ್ರಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿದ್ದಿರಬಹುದು. ಇಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಸಿಲಿಂಡರ್ ಆನ್ ಮಾಡುತ್ತಿದ್ದಂತೆ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.

ಘಟನೆಯಲ್ಲಿ ಅಶೋಕ ನಿರ್ವಾಣಿ, ರಾಜಶ್ರೀ ನಿರ್ವಾಣಿ, 9 ತಿಂಗಳ ಮಗು ಸೇರಿದಂತೆ 7 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಮೂವರನ್ನು ಕೆ ಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button