Kannada NewsLatest

ಕಾಂಗ್ರೆಸ್ ಗೆ ಸೇರ್ಪಡೆಯಾದ ಜೆಡಿಎಸ್ ಮುಖಂಡರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜಂಜುನಾಥ್ ಗೌಡ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು.

Home add -Advt

ಇದೇ ವೇಳೆ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ಕೂಡ ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವೀಣಾ ಕಾಶಪ್ಪನವರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

Related Articles

Back to top button