
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಹುಕ್ಕೇರಿ ಹಿರೇಮಠದ ಶಾಖಾ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗುರುವಾರ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯ ಆಶೀರ್ವಾದ ಪಡೆದರು.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ಡಿ.ಕೆ.ಶಿವಕುಮಾರ ಅವರಿಗೆ ಶ್ರೀಮಠದಿಂದ ಸತ್ಕರಿಸಲಾಯಿತು. ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ, ಮಹಾತಪಸ್ವಿ, ನಡೆದಾಡುವ ದೇವರು ರಂಪಾಪುರಿ ಲಿಂ. ಜಗದ್ಗುರು ಗಂಗಾಧರ ಸ್ವಾಮೀಜಿಯವರ ಆಶೀರ್ವಾದದಿಂದ ನಾವು ಉನ್ನತ ಸ್ಥಾನಕ್ಕೆ ಬೆಳೆಯಲು ಸಾಧ್ಯವಾಯಿತು. ಇವರಿಗೆ ನಾವು ಅಜ್ಜಯ್ಯ ಎಂದು ಕರೆಯುತ್ತಿದ್ದೇವು. ಅಜ್ಜಯ್ಯನ ಪರಂಪರೆಯ ಮಠ ಬೆಳಗಾವಿಯ ಹುಕ್ಕೇರಿ ಹಿರೇಮಠ. ನನಗೆ ಈ ಮಠಕ್ಕೆ ಬಂದರೆ ಅಜ್ಜಯ್ಯನ ಮಠಕ್ಕೆ ಬಂದ ಹಾಗೆ ಆಗುತ್ತದೆ. ಅವರ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ ಎಂದರು.
ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ವೀರಕುಮಾರ ಪಾಟೀಲ, ಬಾಲಾಜಿ ಸಾವಳಗಿ, ಆನಂದ ಗಡ್ಡದೇವರಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ