Kannada NewsLatest

*ಕಾಂಗ್ರೆಸ್ ನಿಂದ ಮಹದಾಯಿ, ಕೃಷ್ಣಾ ಸಮಾವೇಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚಿಸಲು ಸಮಾವೇಶ ನಡೆಸುವ ಕುರಿತು ಮಹತ್ವದ ಸಭೆ ನಡೆಯಲಿದೆ.

 

ಡಿಸೆಂಬರ್ 19ರಂದು ಡಿ.ಕೆ.ಶಿವಕುಮಾರ್ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 5 ಗಂತೆಗೆ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಕೃಷ್ಣ ಹಾಗೂ ಮಹದಾಯಿ ಯೋಜನೆಗಳ ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚಿಸಲು ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಭಾನುವಾರ ಚುನಾವಣಾ ಸಮಿತಿ ಸಭೆಯೂ ಬೆಳಗಾವಿಯಲ್ಲಿ ನಡೆಯಲಿದೆ. ಸೋಮವಾರ ಶಾಸಕಾಂಗ ಪಕ್ಷದ ಸಭೆಯನ್ನು ಸಹ ಆಯೋಜಿಸಲಾಗಿದೆ.

ಡಿ.ಕೆ.ಶಿವಕುಮಾರ್ ಜಿಲ್ಲಾ ಪ್ರವಾಸದ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ.

 

*ಬೆಳಗಾವಿ ಅಧಿವೇಶನ; 4931 ಪೊಲೀಸರ ನಿಯೋಜನೆ*

https://pragati.taskdun.com/belagaviwinter-sessionpolice-security/

Related Articles

Back to top button