ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿಯಿಂದ ಹಣದ ಆಮಿಷ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ, ಮಾಜಿ ಸಚಿವ ಶ್ರೀಮಂತ ಪಾಟೀಲ್ ಹೇಳಿಕೆ ವಿಚಾರವಾಗಿ ಎಸಿಬಿಯಿಂದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಓರ್ವ ಮಾಜಿ ಸಚಿವ, ಶಾಸಕರಾಗಿ ಶ್ರೀಮಂತ ಪಾಟೀಲ್ ನಿಜವಾದ ಮಾತನ್ನು ಈಗ ಬಾಯ್ಬಿಟ್ಟಿದ್ದಾರೆ. ಬಿಜೆಪಿಗೆ ಹೋಗುವ ಮುನ್ನ ತಮಗೆ ಹಣದ ಆಮಿಷ ಒಡ್ಡಲಾಗಿತ್ತು ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಎಸಿಬಿ ಎಫ್ ಐ ಆರ್ ದಾಖಲಿಸಿ ಬಿಜೆಪಿಯ ಯಾರಿಂದ ಹಣದ ಆಮಿಷ ಒಡ್ಡಲಾಗಿತ್ತು ಎಂಬುದನ್ನು ತನಿಖೆ ನಡೆಸಲಿ ಎಂದು ಆಗ್ರಹಿಸಿದರು.
ಬಹಳ ಶುದ್ಧವಾಗಿ ಆಡಳಿತ ನಡೆಸುತ್ತಿರುವುದಾಗಿ ಹೇಳಿಕೆಗಳನ್ನು ನೀಡುವ ಬಿಜೆಪಿ ನಾಯಕರ ಹಣದ ಆಮಿಷದ ಬಗ್ಗೆ ಅಧಿವೇಶನದಲ್ಲಿಯೂ ಹಿಂದೆ ಚರ್ಚೆಯಾಗಿತ್ತು. ಈಗ ಹೊರಗಡೆಯೂ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಆಪರೇಷನ್ ಕಮಲದ ಮೂಲಕ ಹಣದ ಆಮಿಷ ಒಡ್ಡಿದ್ದರು ಎಂಬುದನ್ನು ಸ್ವತ: ಬಿಜೆಪಿ ಶಾಸಕರು ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಆಫರ್ ಬಗ್ಗೆ ಯೂಟರ್ನ್ ಹೊಡೆದ ಶ್ರೀಮಂತ ಪಾಟೀಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ