Kannada NewsLatest

ಬೆಳಗಾವಿ: ಪಿಜಿಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಡಿ ಫಾರ್ಮಸಿ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಪಿಜಿಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲೆ ನೆಹರು ನಗರದಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ಇಚಲಕರಂಜಿಯ 21 ವರ್ಷದ ಭರತ್ ಪಾಟೀಲ್ ಮೃತ ವಿದ್ಯಾರ್ಥಿ. ಭರತ್ ಬೆಳಗಾವಿಯ ಖಾಸಗಿ ಕಾಲೇಜಿನಲ್ಲಿ ಡಿ ಫಾರ್ಮಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ.

ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪರೀಕ್ಷೆಯ ಟೆನ್ ಶನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್ ನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದು ಬರೆದಿಟ್ಟಿದ್ದಾನೆ.

ಸ್ಥಳಕ್ಕೆ ಭೇಟಿ ನೀಡಿರುವ ಎಪಿಎಂಸಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಹಿರಿಯ ನಟ ಸತ್ಯಜಿತ್ ಆಸ್ಪತ್ರೆಗೆ ದಾಖಲು

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button