Latest

ಸರ್ಕಾರದ ನಿರ್ಲಕ್ಷ್ಯ ಹೆಚ್ಚಿದ ಕೊರೊನಾ; ದಡ್ಡಿ ಗ್ರಾಮ ಸೀಲ್ ಡೌನ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಅಂತರಾಜ್ಯ ಪ್ರಯಾಣಿಕರಿಂದಾಗಿಯೇ ಅತಿ ಹೆಚ್ಚು ಕೊರೊನಾ ಸೋಂಕು ಹರಡುತ್ತಿದ್ದು, ಅದರಲ್ಲೂ ಮುಖ್ಯವಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುತ್ತಿರುವವರಿಂದ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.

ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಲಾಕ್‍ಡೌನ್ ಸಡಿಲಿಕೆ ನಂತರ ಮುಂಬೈಗೆ ಕೆಲಸಕ್ಕೆ ಹೋಗಿದ್ದ ಒಂದು ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರು ಗ್ರಾಮಕ್ಕೆ ಆಗಮಿಸಿದ್ದಾರೆ. ಅವರೆಲ್ಲರನ್ನು ಕ್ವಾರಂಟೈನ್ ಮಾಡಿ 14 ದಿನ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಆದರೆ ಸರ್ಕಾರದ ಆದೇಶದ ಮೇರೆಗೆ ಕೊರೊನಾ ವರದಿ ಬರುವ ಮೊದಲೇ ಅವರನ್ನು ಕ್ವಾರಂಟೈನ್ ನಿಂದ ಬಿಡುಗಡೆ ಮಾಡಲಾಗಿದೆ.

ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇದೀಗ ಮನೆಗಳಿಗೆ ತೆರಳಿರುವವರು ಗ್ರಾಮದ ಅಂಗಡಿಗಳಿಗೆ, ಮದುವೆ ಸಮಾರಂಭಗಳಿಗೆ ಓಡಾಡುತ್ತಿದ್ದಾರೆ. ಹೀಗೆ ರಿಲೀಸ್ ಆದ ಎರಡು ದಿನಕ್ಕೆ ಮನೆಗೆ ಹೋದವರ ಪೈಕಿ 16 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪರಿಣಾಮ ಎಲ್ಲರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿ ಇಡೀ ಗ್ರಾಮವನ್ನು ಇದೀಗ ಸೀಲ್‍ಡೌನ್ ಮಾಡಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button