Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಮತ್ತೊಂದು ಹೇಯ ಕೃತ್ಯ; ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಬೆಳವಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆಯೇ ಬುದ್ಧಿಮಾಂದ್ಯ ಮಗಳ ಮೇಲೆ ಅತ್ಯಾಚಾರವೆಸಗಿ ಮಗಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.

ತಾಯಿಯನ್ನು ಕಳೆದುಕೊಂಡಿದ್ದ ಮಾನಸಿಕ ಅಸ್ವಸ್ಥೆ ಮಗಳ ಮೇಲೆ, ತಂದೆ ಮನೆಯಲ್ಲಿಯೇ ನಿರಂತರವಾಗಿ ಹೇಯ ಕೃತ್ಯವೆಸಗಿದ್ದಾನೆ. ಬುದ್ಧಿಮಾಂದ್ಯ ಯುವತಿ ಗರ್ಭಿಣಿಯಾದಾಗ ಸ್ಥಳೀಯರಿಗೆ ಅನುಮಾನ ವ್ಯಕ್ತವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವ ವಿಷಯ ಗೊತ್ತಾಗಿದೆ.

ಸರ್ಕಾರೇತರ ಸಂಸ್ಥೆಯೊಂದು ಫೆಬ್ರವರಿ 2023ರಲ್ಲಿ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದೂರು ಕೂಡ ನೀಡಿತ್ತು. ಈ ಆಧಾರದಲ್ಲಿ ಬುದ್ಧಿಮಾಂದ್ಯೆಯ ತಂದೆ ಮೇಲೆ ಅನುಮಾನಗೊಂಡು ಆತನ ಹಾಗೂ ಬುದ್ಧಿಮಾಂದ್ಯೆಗೆ ಜನಿಸಿದ ಮಗುವಿನ ಡಿಎನ್ ಎ ಪರೀಕ್ಷೆ ನಡೆಸಿದ ಬಳಿಕ ಆತನೇ ಮಗುವಿನ ತಂದೆ ಎಂಬುದು ದೃಢವಾಗಿದೆ.

Home add -Advt

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ದರಾಮಪ್ಪ, ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಎನ್.ಜಿ.ಒ ದೂರು ನೀಡಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಆಕೆಯ ತಂದೆಯೇ ಈ ಕೃತ್ಯವೆಸಗಿರುವುದು ಬಯಲಾಗಿದೆ. ಆರೋಪಿ ವಿರುದ್ಧ ಕೇಸ್ ದಾಖಲಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button