Kannada NewsLatest

ಉಪ ಚುನಾವಣೆ: ನಿಷೇಧಾಜ್ಞೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಗರದ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿ(ಆರ್.ಓ) ರವರ ಕಛೇರಿಯ ಸುತ್ತ ಮುತ್ತ 100 ಮೀಟರ ಸುತ್ತಳತೆಯಲ್ಲಿ ದಿನಾಂಕ 23/03/2021 ರಿಂದ ದಿನಾಂಕ 04/05/2021 ರವರೆಗೆ ಕಾರ್ಯಾಲಯದ ಕೆಲಸದ ಅವಧಿಯಲ್ಲಿ ಜಾರಿಗೆ ಬರುವಂತೆ ಸಿಆರ್‍ಪಿಸಿ 1973 ರ ಕಲಂ 144 ರ ಮೇರೆಗೆ ನಿಷೇದಾಜ್ಞೆಯನ್ನು ವಿಧಿಸಿ ಪೊಲೀಸ್ ಆಯುಕ್ತರಾದ ಡಾ|| ಕೆ. ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ರೋಗ ತಡೆಯಲು ಸರ್ಕಾರದಿಂದ ವಿಧಿಸಲಾಗಿರುವ ನಿಯಮಾವಳಿಗಳನ್ನು ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪಾಲಿಸುವದು. ನಿಷೇಧಾಜ್ಞೆಯನ್ನು ಹೊರಡಿಸಿದ ಸ್ಥಳದಲ್ಲಿ ಮತ್ತು ನಿಗದಿಪಡಿಸಿದ ಸಮಯದಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೇರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.

ನಿಷೇಧಾಜ್ಞೆಯನ್ನು ಹೊರಡಿಸಿದ ಸ್ಥಳದಲ್ಲಿ ಮತ್ತು ನಿಗದಿಪಡಿಸಿದ ಸಮಯದಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ನಿಷೇಧಾಜ್ಞೆಯನ್ನು ಹೊರಡಿಸಿದ ಸ್ಥಳದಲ್ಲಿ ಮತ್ತು ನಿಗದಿಪಡಿಸಿದ ಸಮಯದಲ್ಲಿ ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

ನಿಷೇಧಾಜ್ಞೆಯನ್ನು ಹೊರಡಿಸಿದ ಸ್ಥಳದಲ್ಲಿ ಮತ್ತು ನಿಗದಿಪಡಿಸಿದ ಸಮಯದಲ್ಲಿ ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಅಥವಾ ಬಿಡುವ ಸಾಧನಗಳನತ್ನು ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ.

ನಿಷೇಧಾಜ್ಞೆಯನ್ನು ಹೊರಡಿಸಿದ ಸ್ಥಳದಲ್ಲಿ ಮತ್ತು ನಿಗದಿಪಡಿಸಿದ ಸಮಯದಲ್ಲಿ ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ನಿಷೇಧಾಜ್ಞೆಯನ್ನು ಹೊರಡಿಸಿದ ಸ್ಥಳದಲ್ಲಿ ಮತ್ತು ನಿಗದಿಪಡಿಸಿದ ಸಮಯದಲ್ಲಿ ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ/ ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.

ನಿಷೇಧಾಜ್ಞೆಯನ್ನು ಹೊರಡಿಸಿದ ಸ್ಥಳದಲ್ಲಿ ಮತ್ತು ನಿಗದಿಪಡಿಸಿದ ಸಮಯದಲ್ಲಿ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಯ ಬಗ್ಗೆ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳನ್ನು ಹಾಡುವದನ್ನು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.

ಯಾವುದೇ ವ್ಯಕ್ತಿ ಈ ಮೇಲೆ ವಿವರಿಸಿದ ನಿಷೇಧಾಜ್ಞೆಯನ್ನು ಹೊರಡಿಸಿದ ಸ್ಥಳದಲ್ಲಿ ಮತ್ತು ನಿಗದಿಪಡಿಸಿದ ಸಮಯದಲ್ಲಿ ಮಾರಕಾಸ್ತ್ರಗಳನ್ನು, ಸ್ಪೋಟಕ ವಸ್ತುಗಳನ್ನು, ವಿನಾಶಕಾರಿ ವಸ್ತುಗಳನ್ನು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸುವುದು. ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಪ್ರಕ್ರೀಯೆ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್ ಕಮೀಷನರ್ ಡಾ|| ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button