Belagavi NewsBelgaum NewsKannada NewsKarnataka NewsLatest

*ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಯುವಕನಿಂದ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

23 ವರ್ಷದ ಕುಮರ ಕೊಪ್ಪದ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ನಿವಾಸಿ. ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಯುವಕ ಕಚೇರಿ ಒಳಗೆ ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Home add -Advt

ತಕ್ಷಣ ಜಿಲ್ಲಾಧಿಕರಿ ಕಚೇರಿ ಸಿಬ್ಬಂದಿ ಯುವಕನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕ ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button