Kannada NewsLatest

ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಬೆಳಗಾವಿ ಅಧಿವೇಶನಕ್ಕೆ ಸಿದ್ಧತೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಮೂರನೇ ಅಲೆ ಆತಂಕ ಹಾಗೂ ಹೊಸ ರೂಪಾಂತರಿ ವೈರಸ್ ಭೀತಿ ನಡುವೆಯೇ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ನಡೆಸಲಾಗಿದ್ದು, ಕೋವಿಡ್ ಟೆಸ್ಟ್ ಸಂಖ್ಯೆ ಹೆಚ್ಚಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಅಧಿವೇಶನಕ್ಕೆ ಅಗತ್ಯವಿರುವ ಸಿದ್ಧತೆ ನಡೆಸಲಾಗಿದೆ. ಸುವರ್ಣಸೌಧದಲ್ಲಿ ದುರಸ್ತಿ ಕಾರ್ಯ ಕೂಡ ನಡೆಯುತ್ತಿದೆ ಎಂದರು.

ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತಿದೆ. ಊಟದ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾದಲಾಗುತ್ತಿದೆ. ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡಲಾಗಿದೆ. 2 ಡೋಸ್ ಲಸಿಕೆ ಕಡ್ಡಾಯ ಮಾಡಿಲ್ಲ, ಒಂದು ಡೋಸ್ ಲಸಿಕೆ ಪಡೆದವರಿಗೂ ಅಧಿವೇಶನ ಪ್ರವೇಶಕ್ಕೆ ಅವಕಾಶ ಇರುತ್ತದೆ ಎಂದು ವಿವರಿಸಿದರು.
ಒಮಿಕ್ರಾನ್ ಭೀತಿ; ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ

Home add -Advt

Related Articles

Back to top button