ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚಣೆ ಮುಂದುವರೆದಿದ್ದು, ಬೆಳಗಾವಿಯ ಡಿಸಿಐಬಿ ಘಟಕ ಪೊಲೀಸರು ಹಾಗೂ ಚಿಕ್ಕೋಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 120 ಕೆಜಿ ಗಾಂಜಾ ಸಮೇತ ಅಂತರಾಜ್ಯ ಡ್ರಗ್ ಪೆಡ್ಲರ್ ನನ್ನು ಬಂಧಿಸಸಲಾಗಿದೆ.
ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷಣ ನಿಂಬರಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ದಿ ಮಾರ್ಗದಶನದಲ್ಲಿ ಡಿಸಿಐಬಿ ಘಟಕದ ಇನ್ಸ್ ಪೆಕ್ಟರ್ ನಿಂಗೇಗೌಡ ಪಾಟೀಲ್ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಅಶ್ಪಾಕ್ ಮುಲ್ಲಾ ನನ್ನು ಮೀರಜ್ ನಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿಯಿಂದ 24 ಲಕ್ಷ ರೂ ಮೌಲ್ಯದ 120 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ವಾಹನಗಳನ್ನು ಕೂಡ ಸೀಜ್ ಮಾಡಲಾಗಿದೆ.
ಇನ್ನು ಬಂಧಿತ ಅಶ್ಪಾಕ್ ಮುಲ್ಲಾ ವಾರಂಗಣ ಹಾಗೂ ಹೈದರಾಬಾದ್ ನ ಇಬ್ಬರು ವ್ಯಕ್ತಿಗಳಿಂದ ಗಾಂಜಾ ಖರೀದಿಸಿ ಮಹಾರಾಷ್ಟ್ರದ ಸಾಂಗ್ಲಿ, ಮೀರಜ್, ಕರ್ನಾಟಕದ ಹುಬ್ಬಳ್ಲಿ-ಧಾರವಾಡ, ಚಿಕ್ಕೋಡಿ ಸೇರಿದಂತೆ ಹಲವೆಡೆಗಳಲ್ಲಿ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ