Kannada NewsLatest

ಉಪಚುನಾವಣೆ; ವಿಜಯೇಂದ್ರ ಸ್ಪರ್ಧೆ ಬಗ್ಗೆ ಡಿಸಿಎಂ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥಾವಾ ಪುನಾರಚನೆ ಯಾವುದು ಉತ್ತಮ ಅದನ್ನು ಹೈಕಮಾಂಡ್ ಹಾಗೂ ಸಿಎಂ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಎಂಎಲ್ ಸಿ ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಾವು ಮನವಿ ಮಾಡಿದ್ದೇವೆ. ಈ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿ.5ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ವೇಳೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಲ್ಲ. ಆದರೆ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ ಎಂದರು.

ಇದೇ ವೇಳೆ ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಶ್ವತ್ಥನಾರಾಯಣ, ಈ ಬಗ್ಗೆ ಪಕ್ಷ ನಿರ್ಧರಿಸುತ್ತೆ. ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button