ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ, ಚಪ್ಪಲಿ ಎಸೆದಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಸಮಜಾಯಿಷಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೂ ಬೆಂಬಲಿಗರ ವಾಹನದ ಮೇಲೆ ಕಲ್ಲು ತೂರಾಟದಂತಹ ಘಟನೆ ನಡೆದಿಲ್ಲ. ವಿಐಪಿಗಳು ಬಂದು ಹೋದ ಮೇಲೆ ಅಂತಹ ಘಟನೆ ನಡೆದಿದ್ದರೆ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.
ಡಿ.ಕೆ.ಶಿವಕುಮಾರ್ ಬೆಳಗಾವಿ ಭೇಟಿಗೆ ವಿರೋಧ ವ್ಯಕ್ತಪಡಿಸಿದ್ದ ರಮೇಶ್ ಜಾರಕಿಹೊಳಿ ಬೆಂಬಲಿಗರು ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ವಾಹನದ ಗಾಜುಗಳನ್ನು ಪುಡಿಗೈದಿದ್ದಲ್ಲದೆ, ವಾಹನಗಳ ಮೇಲೆ ಚಪ್ಪಲಿ ಎಸೆದಿರುವ ಘಟನೆಯೂ ನಡೆದಿದೆ. ಆದರೆ ಇಂತಹ ಘಟನೆ ನಡೆದೇ ಇಲ್ಲ ಎಂದು ಡಿಸಿಪಿ ಸಮಜಾಯಿಷಿ ನಿಡಿದ್ದು, ಡಿ.ಕೆ.ಶಿವಕುಮಾರ ಅಲ್ಲಿಂದ ತೆರಳಿದ ನಂತರ ಪ್ರತಿಭಟನೆ ನಡೆದಿದೆ. ದೃಶ್ಯಾವಳಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನದ ಮೇಲೆ ಕಲ್ಲು, ಚಪ್ಪಲಿ ಎಸೆದ ರಮೇಶ್ ಜಾರಕಿಹೊಳಿ ಬೆಂಬಲಿಗರು
ಬಿಜೆಪಿ ಸರಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಸಕ್ಸಸ್ – ಡಿ.ಕೆ.ಶಿವಕುಮಾರ
ಚಂಬಲ್ ಕಣಿವೆ ಡಕಾಯಿತರಂತೆ ರಮೇಶ್ ಜಾರಕಿಹೊಳಿ ಗೂಂಡಾಪಡೆ ವರ್ತನೆ; ಕಾಂಗ್ರೆಸ್ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ