Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಧ್ವಜಸ್ತಂಭ ನೆಡುತ್ತಿದ್ದಾಗ ದುರ್ಘಟನೆ; ಯುವಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕುಂದಾನಗರಿ ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗಲೇ ದುರಂತವೊಂದು ಸಂಭವಿಸಿದೆ. ಧ್ವಜಸ್ತಂಭ ನೆಡುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ್ದಾನೆ.

ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಬಸ್ ನಿಲ್ದಾಣದ ಎದುರು ಧ್ವಜಸ್ತಂಭ ನೆಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ತಯಾರಿ ನಡೆಸಲಾಗುತ್ತಿತ್ತು. ಧ್ವಜಸ್ತಂಭ ನೆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪ್ರಜ್ವಲ್ ಚನ್ನೇಗೌಡ (18) ಮೃತ ಯುವಕ. ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button