
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಆವರಿಸಿದ್ದು, ರೈತರ ಬೆಳೆಗಳಿಗೆ ನೀರಿಲ್ಲದೇ ಪರಿತಪಿಸುವಂತಾಗಿದೆ. ಅಲ್ಲದೇ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭಾ ಜಲಾಶಯದಿಂದ ಕಾಲುಗೆ ನೀರು ಬಿಡಲಾಗಿದೆ.
ಬುಧವಾರ ನಡೆದ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 15 ದಿನಗಳ ಕಾಲ ನೀರು ಬಿಡಲು ಆದೇಶ ನೀಡಿದ್ದರು.
ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಹೆಚ್.ಕೋನರೆಡ್ಡಿ ಸೇರಿದಂತೆ ಹಲವರು ಮಲಪ್ರಭಾ ಜಲಾಶಯದಿಂದ ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ಜಾಕ್ ವೆಲ್ ನಿಂದ ನೀರು ಬಿಡಲಾಗಿದೆ.
ಬೆಳಗಾವಿ, ಬಾಗಲಕೋಟೆ, ಧರವಾಡ, ಗದಗ ಜಿಲ್ಲೆಯ 14 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಲುವಾಗಿ ನೀರು ಬಿಡುಗಡೆ ಮಾಡಲಾಗಿದೆ.