
ಪ್ರಗತಿವಾಹಿನಿ ಸುದ್ದಿ : ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಳ್ಳಾರಿಯಿಂದ ಪೊಲೀಸರು ಆಗಮಿಸಿ ಬಂಧನಕ್ಕೆ ಮುಂದಾಗಿದ್ದರು. ಆದ್ರೆ ವಿಚಾರಣೆಗೆ ಸಹಕರಿಸೋದಾಗಿ ಭರವಸೆ ಕೊಟ್ಟ ಬಳಿಕ ನೋಟಿಸ್ ನೀಡಿ ಹಿಂದಿರುಗಿದ್ದಾರೆ ಎಂದು ಫೇಸ್‌ಬುಕ್ ಲೈವ್‌ನಲ್ಲಿ ಸಮೀರ್ ಹೇಳಿದ್ದಾರೆ.
ಇನ್ನೂ ಸಮೀರ್ ಲೈವ್‌ನಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು ಘಟನೆಯ ಸಂಪೂರ್ಣ ವಿವರ ವಿಡಿಯೋದಲ್ಲಿದೆ. ಸೌಜನ್ಯ ಪ್ರಕರಣವನ್ನು ಧರ್ಮಸ್ಥಳದ ಮಂಜುನಾಥ ಸ್ವಾಮಿ ಅಥವಾ ಹಿಂದೂ ದೇಗುಲಕ್ಕೆ ಅವಮಾನ ಮಾಡಲಾಗ್ತಿದೆ ಎಂದು ಪ್ರಕರಣವನ್ನು ತಿರುಚಲಾಗುತ್ತಿದೆ ಎಂದು ಬೇಸರವನ್ನು ಹೊರ ಹಾಕಿದ್ದಾರೆ.