Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಘೋರ ದುರಂತ; ಕರೆಂಟ್ ಶಾಕ್ ಗೆ ತಂದೆ-ಮಗ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ತಂದೆ ಹಾಗೂ ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.

ಪ್ರಭು ಹಂಬಿ (69) ಹಾಗೂ ಮಂಜುನಾಥ್ ಹಂಬಿ (29) ಮೃತರು. ಮನೆ ಮುಂದಿರುವ ವಿದ್ಯುತ್ ಕಂಬ ಸ್ಪರ್ಶಿಸಿ ಇಬ್ಬರೂ ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬ ಸ್ಪರ್ಶಿಸಿದ ತಂದೆಯನ್ನು ಬಿಡಿಸಲು ಹೋಗಿ ಮಗನಿಗೂ ಕರೆಂಟ್ ಶಾಕ್ ಹೊಡೆದಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ತಂದೆ-ಮಗನ ಸಾವಿಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು, ಗ್ರಾಮಸ್ಥರು ಆರೋಪಿಸಿದ್ದಾರೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

Related Articles

Back to top button