Kannada News

ಟೈರ್ ಟ್ಯೂಬ್‍ಗಳಲ್ಲಿ ಕಳ್ಳಭಟ್ಟಿ ಸಾಗಾಟ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಈ ನಡುವೆ ರಾಜ್ಯದ ಹಲವೆಡೆ ಕಳ್ಳ ಭಟ್ಟಿ ದಂಧೆ ಜೋರಾಗಿದೆ. ಟೈರ್ ಟ್ಯೂಬ್‍ಗಳಲ್ಲಿ ಕಳ್ಳ ಭಟ್ಟಿ ಸಂಗ್ರಹಿಸಿ ಸಾಗಿಸುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಸುಮಾರು 330 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಡಿದ್ದಾರೆ.

ಹುಕ್ಕೇರಿ ತಾಲೂಕಿನ ಶಹಬಂದರ ಗ್ರಾಮದಲ್ಲಿ ಕಳ್ಳ ಭಟ್ಟಿ ದಂಧೆಕೋರರ ಮೇಲೆ ದಾಳಿ ನಡೆಸಿದ ಪೊಲೀಸರು 330 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ.

Home add -Advt

ಶಹಬಂದರ್ ಗ್ರಾಮದ ಬಳಿ ಕಳ್ಳಭಟ್ಟಿ ಸಾಗಿಸುತ್ತಿದ್ದ ಎರಡು ದ್ವಿ-ಚಕ್ರ ವಾಹನ ಹಾಗೂ ತಲಾ 30 ಲೀಟರ್ ಇರುವ 11 ಟೈರ್ ಟ್ಯೂಬ್‍ಗಳಲ್ಲಿ ಸಂಗ್ರಹಿಸಿ ಸರಬರಾಜು ಮಾಡುತ್ತಿದ್ದ ಕಳ್ಳ ಭಟ್ಟಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದಲ್ಲಿನ ಮೂರು ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

————————————-

Please open the link and like the Face book page.
ಈ ಲಿಂಕ್ ಓಪನ್ ಮಾಡಿ, ಪೇಜ್ ಲೈಕ್ ಮಾಡಿ.
Thank you

Related Articles

Back to top button