*ಬೆಳಗಾವಿಯಲ್ಲಿ ಮತ್ತೊಂದು ದುರಂತ: ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: 3 ಸಾವು*

ಪ್ರಗತಿವಾಹಿನಿ ಸುದ್ದಿ: ಇನಾಮದಾರ್ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ಈ ದುರಂತ ಸಂಭವಿಸಿದೆ. ವಿಕ್ರಮ್ ಇನಾಮದಾರ್ ಎಂಬುವವರಿಗೆ ಸೇರಿದ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡಿದೆ. ಈ ವೇಳೆ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. 5 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ತೀವ್ರ ಗಂಭೀರವಾಗಿದೆ. ಗಾಯಾಳುಗಳನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು … Continue reading *ಬೆಳಗಾವಿಯಲ್ಲಿ ಮತ್ತೊಂದು ದುರಂತ: ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: 3 ಸಾವು*