ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೆದ್ದಾರಿ ತಡೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಸ್ತೆ ಮೇಲೆ ಕುಳಿತು ರೈತ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯ ಹಿರೆಬಾಗೆವಾಡಿಯಲ್ಲಿ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ರೈತ ಮಹಿಳೆ ಜಯಶ್ರೀ ರಸ್ತೆ ಮೇಲೆಯೇ ಉರುಳುಸೇವೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ರಸ್ತೆಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸುತ್ತಿದ್ದ ರೈತ ಮಹಿಳೆಯರನ್ನು ಪೊಲಿಸರು ಎಳೆದೊಯ್ದು ಬಸ್ ಹತ್ತಿಸಿದ್ದಾರೆ.
ಈ ನಡುವೆ ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಹೆಸರಲ್ಲಿ ರಾಜಕೀಯ ಮಾಡುವ ಕೆಲಸ ನಡೆದಿದೆ; ನಳೀನ್ ಕುಮಾರ್ ಕಟೀಲ್ ಕಿಡಿ
ರಾಜ್ಯಾದ್ಯಂತ ಹೆದ್ದಾರಿ ಬಂದ್ ಪ್ರತಿಭಟನೆ ಆರಂಭ; ಕೇಂದ್ರದ ವಿರುದ್ಧ ರೈತರ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ