ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಕೋವಿಡ್ ಸಮಸ್ಯೆಯಿಂದ ಜನರು ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಭಾರತ್ ಬಂದ್ ನಡೆಸಿ ತೊಂದರೆ ಕೊಡುವುದು ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಬೆಳಗಾವಿ ನ್ಯೂ ಸರ್ಕ್ಯೂಟ್ ಹೌಸ್ ನಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ, ಕೋವಿಡ್ ಸಂಕಷ್ಟದಿಂದ ಈಗಷ್ಟೇ ಹೊರ ಬರುತ್ತಿದ್ದೇವೆ. ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ಈಗಷ್ಟೇ ಆರಂಭವಾಗುತ್ತಿದೆ. ಹೀಗಿರುವಾಗ ಭಾರತ್ ಬಂದ್ ನಡೆಸಿ ಪ್ರತಿಭಟನೆ ಹೆಸರಲ್ಲಿ ಜನರಿಗೆ ಇನ್ನಷ್ಟು ತೊದರೆ ಕೊಡುವುದು ಬೇಡ ಎಂದರು.
ಇದೇ ವೇಳೆ ಸಕ್ಕರೆ ಆಯುಕ್ತಾಲಯವನ್ನು ಬೆಳಗಾವಿಗೆ ಸ್ಥಳಾಂತರಿಸುವಂತೆ ರೈತ ಮುಖಂಡರು ಮಾಡಿದ ಮನವಿಗೆ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಕಬ್ಬು ಬೆಳೆಗಾರರ ಬಾಕಿ ಹಣವನ್ನು ನೀಡುವಂತೆಯೂ ಸೂಚಿಸುತ್ತೇವೆ. ಇನ್ನು ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.
ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಪರಿಹಾರವನ್ನು ಕೊಡುತ್ತಿದೆ. ಈಗಾಗಲೇ ಪರಿಹಾರ ಕಾರ್ಯ ಆರಂಭವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ 44,205 ಮನೆಗಳಿಗೆ ಪರಿಹಾರ ನೀಡಲಾಗಿದೆ. ಬೆಳೆ ಹಾನಿಗೆ 1.63 ಲಕ್ಷ ರೈತರಿಗೆ ಪರಿಹಾರ ಕೊಟ್ಟಿದ್ದೇವೆ ಎಂದು ತಿಳಿಸಿದರು.
ಪತ್ರಕರ್ತ ಯಲ್ಲಪ್ಪ ಕಾನಾರ ಕುಟುಂಬಕ್ಕೆ ಪರಿಹಾರ ನೀಡಿದ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ