ಬೆಳಗಾವಿಯಲ್ಲಿ ರೈತರ ಅರೆಬೆತ್ತಲೆ ಪ್ರತಿಭಟನೆ; ಧರಣಿ ವೇಳೆ ಎಲ್ಲಮ್ಮ ದೇವಿ ಮೈಮೇಲೆ ಬಂತೆಂದು ಮಹಿಳೆ ಹೈಡ್ರಾಮಾ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
ಕುಂದಾನಗರಿ ಬೆಳಗಾವಿಯಲ್ಲಿ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯ ಹಿರೇಬಾಗೆವಾಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಮಹಿಳೆಯರು, ವೃದ್ಧೆಯರು ಕೂಡ ಪಾಲ್ಗೊಂದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಿರೇಬಾಗೇವಾಡಿ ರಾಶ್ಃತ್ರೀಯ ಹೆದ್ದಾರಿ ತಡೆಯಲು ಪ್ರತಿಭಟನಾಕಾರರು ಮುಂದಾಗುತ್ತಿದ್ದಂತೆ ಪೊಲಿಸರು ತಡೆದಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಕೈಯಲ್ಲಿ ರೈತ ಧ್ವಜ ಹಿಡಿದು, ಯಲ್ಲಮ್ಮ ದೇವಿ ಮೈಮೇಲೆ ಬಂದಿದ್ದಾಳೆ ಎಂದು ಹೇಳಿ ಮೈಮೇಲೆ ದೇವರು ಬಂದಂತೆ ವರ್ತಿಸಿದ ಘಟನೆ ನಡೆದಿದೆ.
ಭಾರತ್ ಬಂದ್; ಬೆಳಗಾವಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ