ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೇಂದ್ರದ ನೂತನ ಕೃಷಿ ಕಾಯ್ದೆ ವಿರುದ್ಧ ಬೆಳಗಾವಿಯಲ್ಲಿಯೂ ರೈತರು ಪ್ರತಿಭಟನೆ ನಡೆಸಲಿದ್ದು, 15ಕ್ಕೂ ಹೆಚ್ಚು ಜಿಲ್ಲೆಗಳ ರೈತರು ಇಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ರಾಯಚೂರು, ಕಲಬುರ್ಗಿ, ಬೀದರ್, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ರೈತರು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಲಿದ್ದು, ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ವಾಪಸ್ ಪಡೆಯುವಮ್ತೆ ಆಗ್ರಹಿಸಲಿದ್ದಾರೆ. ಪ್ರತಿಭಟನೆ ಬಳಿಕ ಸುವರ್ಣ್ ಸೌಧಕ್ಕೆ ಮುತ್ತಿಗೆ ಹಾಕಲು ಮಣ್ಣಿನ ಮಕ್ಕಳು ಯೋಜನೆ ರೂಪಿಸಿದ್ದಾರೆ.
ಇದೇ ವೇಳೆ ಮುಂಜಾಗೃತಾ ಕ್ರಮವಾಗಿ ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ನೆ ಜಾರಿಗೊಳಿಸಲಾಗಿದ್ದು, ಹೆಚ್ಚಿನ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಇನ್ನು ಹಲಗಾ ಗ್ರಾಮದ ಬ್ರಿಡ್ಜ್ ಬಳಿ ಪ್ರತಿಭಟನಾ ರೈತರನ್ನು ತಡೆಯಲು ಪೊಲೀಸರು ಸಜ್ಜಾಗಿದ್ದು, 5 ಸಿಪಿಐ, 70 ಕಾನ್ಸ್ ಟೆಬಲ್, 3 ಸಿಎಆರ್ ತುಕಡಿ, 20 ಮಹಿಳಾ ಕಾನ್ಸ್ ಟೇಬಲ್ ಗಳನ್ನು ನಿಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ