Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಫೈನಾನ್ಸ್ ಸಿಬ್ಬಂದಿಗಳಿಂದ ಮನೆ ಸೀಜ್: ಮಗುವಿನ ಸಮೇತ ಬೀದಿಗೆ ಬಿದ್ದ ಕುಟುಂಬ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರೆದಿದೆ. ಫೈನಾನ್ಸ್ ಸಿಬ್ಬಂದಿಗಳು ಮನೆ ಸೀಜ್ ಮಾಡಿದ ಪರಿಣಾಮ ಮೂರು ತಿಂಗಳ ಮಗುವಿನ ಸಮೇತ ಕುಟುಂಬ ಬೀದಿಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Home add -Advt

ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಖಾಸಗಿ ಫೈನಾನ್ಸ್ ಕಂಪನಿಯ ಕಿರುಕುಳದಿಂದ ಕುಟುಂಬ ಬೀದಿಗೆ ಬಿದ್ದಿದೆ.

ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಕಂಪನಿಯಿಂದ ಮನೆ ಸೀಜ್ ಮಾಡಲಾಗಿದ್ದು, ಮೂರು ತಿಂಗಳ ಹಸುಗೂಸು ಸೇರಿ ಐವರು ಕುಟುಂಬಸ್ಥರು ಮನೆ ಹೊರಗೆ ಊಟ, ನಿದ್ರೆಯಿಲ್ಲದೆ ರಾತ್ರಿ ಕಳೆದಿದ್ದಾರೆ.

ಹನುಮಂತ ಪಾಟೀಲ್ ಎಂಬುವವರು ತಂದೆ ಶ್ರೀಕಾಂತ್ ಪಾಟೀಲ್ ಹೃದಯ ಶಸ್ತ್ರಚಿಕಿತ್ಸೆಗಾಗಿ ಮನೆ ಅಡವಿಟ್ಟು ಸುಮಾರು 20 ಲಕ್ಷ ರೂ. ಸಾಲ ಪಡೆದಿದ್ದರು. ಕಳೆದ ವರ್ಷ ಶ್ರೀಕಾಂತ್ ನಿಧನರಾದ ಬಳಿಕ, ಆರೋಗ್ಯ ಸಮಸ್ಯೆಯಿಂದಾಗಿ ಹನುಮಂತ ಕಳೆದ ಏಳು ತಿಂಗಳಿಂದ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ. ಸುಮಾರು ಏಳು ಲಕ್ಷ ರೂ. ಬಾಕಿ ಇದ್ದ ಹಿನ್ನೆಲೆಯಲ್ಲಿ ಏಕಾಏಕಿ ಬಂದ ಪೈನಾನ್ಸ್ ಕಂಪನಿಯ ಸಿಬ್ಬಂದಿ ಮನೆ ಸೀಜ್ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಹನುಮಂತ ದಂಪತಿಗೆ ಮೂರು ತಿಂಗಳ ಹಸುಕೂಸಿದ್ದು, ಬಾಣಂತಿ-ಮಗು ಸೇರಿ ಒಟ್ಟೂ ಐವರು ಕುಟುಂಬಸ್ಥರು ರಾತ್ರಿಯಿಡೀ ಬೀದಿಯಲ್ಲಿ ಕಾಲ ಕಳೆದಿದ್ದಾರೆ. ಮನೆಯಲ್ಲಿ ಇನ್ನೋರ್ವ 5 ತಿಂಗಳ ಬಾಣಂತಿ-ಕೂಸು ಇದ್ದು, ರಾತ್ರಿ ಊಟವಿಲ್ಲದೆ, ಚಳಿಯಿಂದ ಬಳಲಿದ ಕಾರಣ ಮಗು ಅನಾರೋಗ್ಯಕ್ಕೀಡಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹನುಮಂತ ಪಾಟೀಲರ ಪತ್ನಿ ಶ್ರೀದೇವಿ ಅಳಲು ತೋಡಿಕೊಂಡಿದ್ದಾರೆ.

ಬಟ್ಟೆ, ಹಾಸಿಗೆ, ಪಾತ್ರೆ ಸೇರಿ ಮನೆಯೊಳಗಿನ ಯಾವ ವಸ್ತುವನ್ನೂ ತೆಗೆದುಕೊಳ್ಳಲು ಬಿಡದ ಸಿಬ್ಬಂದಿ, ಏಕಾಏಕಿ ಮನೆಗೆ ಬೀಗ ಹಾಕಿ ಹೋಗಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

Related Articles

Back to top button