
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ವ್ಯಕ್ತಿಯೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ರಾಯಬಾಗ ಪಟ್ಟಣದಲ್ಲಿ ನಡೆದಿದೆ.
ಬಸವರಾಜ್ ಆತ್ಮಹತ್ಯೆಗೆ ಶರಣಾದವರು. ಬಸವರಾಜ್ 4 ಫೈನಾನ್ಸ್ ಗಳಲ್ಲಿ 2.50 ಲಕ್ಷ ಸಾಲ ಪಡೆದಿದ್ದರು. ವಾರದ ಕಂತು ಕಟ್ಟುವಂತೆ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು. ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಫೆ.11ರಂದು ವಿಷ ಸೇವಿಸಿದ್ದರು.
ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಆರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ್, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ