ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿನ ಗದ್ದೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಪ್ರಮಾಣದ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿವಾಪುರ ಗ್ರಾಮದಲ್ಲಿ ನಡೆದಿದೆ.
5 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ನೂರಾರು ಎಕರೆಯಲ್ಲಿ ಬೆಳೆದ ಕಬ್ಬು ಬೆಂಕಿಯಿಂದ ಬಚಾವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಇದೇ ವೇಳೆ ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 450 ಕ್ವಿಂಟಲ್ ಗೂ ಅಧಿಕ ಮೆಕ್ಕೆಜೋಳ ಬೆಂಕಿಗಾಹುತಿಯಾಗಿವೆ.
ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ