ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಜಲಾಶಯಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಬೆಳಗಾವಿಯಲ್ಲಿ ಪ್ರವಾಹ ಭೀತಿ ಶುರುವಾಗಿದೆ.
ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಘಟಪ್ರಭಾ ನದಿಗೆ 30,000 ಕ್ಯೂಸೆಕ್ ನೀರು ಬಿದಲಾಗಿದೆ. ಮಲಪ್ರಭಾ ನದಿಗೆ 15,000 ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದಾಗಿ ನದಿ ತೀರದ ಗ್ರಾಮಗಳು ಮುಳುಗಡೆಯಾಗಿವೆ. ಜಿಲ್ಲೆಯಲ್ಲಿ 17 ಸೇತುವೆಗಳು ಸಂಪೂರ್ಣ ಮುಳುಗಿದ್ದು, 34 ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.
ಬೆಳಗವೈ ಜಿಲ್ಲೆಯ ಚಿಕ್ಕೋಡಿ, ಖಾನಾಪುರ, ಮೂಡಲಗಿ, ಗೋಕಾಕ್, ನಿಪ್ಪಾಣಿ ತಾಲೂಕಿನ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದಾಗಿ ಗ್ರಾಮಗಳಿಗೆ ನೀರು ನುಗ್ಗುತ್ತಿದ್ದು, ಪ್ರವಾಹ ಭೀತಿ ಆರಂಭವಾಗಿದೆ. ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ