ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳ ಅಬ್ಬರಕ್ಕೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ನೆರಹಾವಳಿ ನಡುವೆ ಗ್ರಾಮಸ್ಥರಲ್ಲಿ ಮೊಸಳೆ ಭೀತಿ ಶುರುವಾಗಿದೆ. ಬೈಲಹೊಂಗಲ ತಾಲೂಕಿನ ಮಾಟೋಳ್ಳಿ ಗ್ರಾಮದ ಮಲಪ್ರಭಾ ನದಿ ತೀರದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ.
ಸುಮಾರು 10 ಅಡಿ ಉದ್ದದ ಮೊಸಳೆ ಕಂಡು ಗ್ರಾಮಸ್ಥರು ಕಂಗಾಲಾಗಿದ್ದಾರೆ. ಇದೇ ಮೊಸಳೆ ನಾಲ್ಕು ದಿನಗಳ ಹಿಂದೆ ವೇದಗಂಗಾ ನದಿಯಲ್ಲಿ ಕಾಣಿಸಿಕೊಂಡಿತ್ತು. ಒಂದೆಡೆ ಪ್ರವಾಹ, ಮತ್ತೊಂದೆಡೆ ಗ್ರಾಮಕ್ಕೆ ಆಗಮಿಸುತ್ತಿರುವ ಬೃಹತ್ ಮೊಸಳೆಯಿಂದಾಗಿ ಜನರು ಜೀವಭಯದಲ್ಲಿ ಕಾಲಕಳೆಯುವ ಸ್ಥಿತಿ ನಿರ್ಮಾಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ