ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ತಾಲೂಕಾಡಳಿತ ಪ್ರವಾಹ ಸಂತ್ರಸ್ಥರಿಗಾಗಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಯಕ್ಸಂಬಾ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯಿಂದ ಉಚಿತ ಊಟ ವ್ಯವಸ್ಥೆ ಮಾಡಲಾಯಿತು.
ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಜೊಲ್ಲೆ ಉದ್ಯೋಗ ಸಂಸ್ಥೆ ಪದಾಧಿಕಾರಿಗಳು ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿ ನೆರೆ ಸಂಕಷ್ಟಕ್ಕೊಳಗಾಗಿರುವವರಿಗೆ ಊಟ ವಿತರಿಸಿದರು.
ಈ ವೇಳೆ ಮಾತನಾಡಿದ ಬೀರೇಶ್ವರ ಸಹಕಾರಿ ಸಂಸ್ಥೆಯ ಅಧ್ಯಕ್ಷ ಜಯಾನಂದ ಜಾಧವ ಸುದ್ದಿಗಾರರೊಂದಿಗೆ ಮಾತನಾಡಿ, ಕೃಷ್ಣಾ ತೀರದಲ್ಲಿ ಪ್ರವಾಹಕ್ಕೆ ತುತ್ತಾದ ಜನರಿಗೆ ಸ್ಥಳಾಂತರಿಸಲು ಉಚಿತ ವಾಹನ ವ್ಯವಸ್ಥೆ, ಜೊತೆಗೆ ಅವರಿಗೆ ಆಹಾರ ವಿತರಣೆ ಮಾಡುವ ಮೂಲಕ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಶಿಕಲಾ ಜೊಲ್ಲೆ ನೇತೃತ್ವದ ಜೊಲ್ಲೆ ಉದ್ಯೋಗ ಸಮೂಹ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಸದಾ ಜನರೊಂದಿಗೆ ಇದ್ದು ಸೇವೆ ಮಾಡುತ್ತಿದೆ ಎಂದರು.
ಕೋವಿಡ್ ಮಹಾಮಾರಿ ಸಂದರ್ಭದಲ್ಲಿಯು ಸಹ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕೋವಿಡ್ ಕೇರ ಸೆಂಟರ್ ಹಾಗೂ ಕೀಟಗಳನ್ನು ವಿತರಿಸುವ ಮೂಲಕ ಜನರ ಜೀವ ಉಳಿಸುವ ನಿಟ್ಟಿನಲ್ಲಿ ಸೇವೆ ಮಾಡುವ ಮೂಲಕ ಜನರು ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಶಿಕಲಾ ಜೊಲ್ಲೆ ಅವರ ವಿಶ್ವಾಸಕ್ಕೆ ದಕ್ಕೆಯಾಗದಂತೆ ಸೇವೆ ಮಾಡುತ್ತಿದ್ದು ಸದಾ ಜನರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜ್ಯೋತಿಪ್ರಸಾದ ಜೊಲ್ಲೆ, ಉಪಾಧ್ಯಕ್ಷ ಸಿದ್ರಾಮ ಗಡದೆ,ಜ್ಯೋತಿ ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ಖೋತ,ಶಂಕರ ಶಾಹಿರ, ಅಣ್ಣಾಸಾಹೇಬ ಪಾಟೀಲ, ದಿಲೀಪ ಪವಾರ, ಸಂಜಯ ನಾಂದರೇ,ಶ್ರೀಕಾಂತ ಲಂಬುಗೋಳ,ಬಾಳಗೌಡಾ ರೇಂದಾಳೆ, ಸದಾಶಿವ ಕೊಕಣೆ, ಮತಾಬ ಮಕಾನದಾರ,ಲಕ್ಷ್ಮಣ ನಾಯಕ್, ಅನೀಲ ಪರಗೌಡನವರ, ಹರೀಶ ಇನಾಂದಾರ ಉಪಸ್ಥಿತರಿದ್ದರು.
10 ದಿನಗಳೊಳಗೆ ಸೇತುವೆ ದುರಸ್ತಿಗೊಳಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ