Belagavi NewsBelgaum News
*ಬೆಳಗಾವಿಯಲ್ಲಿ ಪ್ರವಾಹ ಭೀತಿ: ಮಲ್ಲಿವಾಡ-ದತ್ತವಾಡ ಸೇರಿದಂತೆ ಐದು ಸೇತುವೆಗಳು ಮುಳುಗಡೆ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬೆಳಗಾವಿಯ ಬಹುತೇಕ ಕಡೆಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಕೃಷ್ಣ, ದೂದ್ ಗಂಗಾ, ಮಲಪ್ರಭಾ, ಘಟಪ್ರಭಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೇತುವೆಗಳು ಮುಳುಗಡೆಯಾಗಿವೆ.
ಭಾರಿ ಮಳೆಯಿಂದಾಗಿ ದೂದ್ ಗಂಗಾ, ಕೃಷ್ಣಾ ನದಿ ಅಬ್ಬರ ಹೆಚ್ಚಾಗಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಚಿಕ್ಕೋಡಿ ತಾಲೂಕಿನಲ್ಲಿ ಮಲ್ಲಿವಾಡ-ದತ್ತವಾಡ ಸಂಪರ್ಕ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಹಲವು ಗ್ರಾಮಗಳು ಮುಳುಗಡೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಐದು ಸಂಪರ್ಕ ಸೇತುವೆಗಳು ಮುಳುಗಡೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ