Latest
ಪ್ರಧಾನಿ ಮೋದಿ, ಜೆ.ಪಿ ನಡ್ಡಾ ಭೇಟಿಯಾದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿರುವ ಬಸವರಾಜ್ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
ನವದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಇದೇ ವೇಳೆ ಕೆಲ ಕಾಲ ಚರ್ಚೆ ನಡೆಸಿದರು.

ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.
ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಲಿದ್ದು, ಈ ವೇಳೆ ಸಂಪುಟ ರಚನೆ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.
ಅಮಿತ್ ಶಾ, ಸೇರಿ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ




