Kannada NewsLatest

ನಾಳೆ ಹುಕ್ಕೇರಿ ಹಿರೇಮಠದಲ್ಲಿ ಗಡಿ ಕನ್ನಡ ಸಾಂಸ್ಕೃತಿಕ ಉತ್ಸವ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಶ್ರೀ ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನ (ರಿ) ಹಿರೇಮಠ ಹುಕ್ಕೇರಿ ಸಹಯೋಗದಲ್ಲಿ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಜ.10 ಸೋಮವಾರ ಬೆಳಗ್ಗೆ 10.30 ರಿಂದ ಸಂಜೆ 6ರವೆಗೆ ಗಡಿ ಕನ್ನಡ ಸಾಂಸ್ಕೃತಿಕ ಉತ್ಸವ ಜರುಗಲಿದೆ.

ಗಡಿ ಕನ್ನಡ ಸಾಂಸ್ಕೃತಿಕ ಉತ್ಸವದ ಉದ್ಘಾಟನೆಯನ್ನು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ನೆರವೆರಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ವಹಿಸಲಿದ್ದಾರೆ. ಕರ್ನಾಟಕ ಗಡಿ ಪ್ರಾಧಿಕಾರದ ಅಧ್ಯಕ್ಷ ಡಾ. ಸೋಮಶೇಖರ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಾನಿದ್ಯವನ್ನು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ.

ಅತಿಥಿಗಳಾಗಿ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಭಯ ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಮಾಹಿತಿ ಹಕ್ಕು ಆಯೋಗದ ಆಯುಕ್ತೆ ಬಿ.ವಿ.ಗೀತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್, ಅಖಿಲ ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಸಿದ್ದಣ್ಣ ಮೇಟಿ, ಖ್ಯಾತ ವಾಸ್ತು ತಜ್ಞ ಶ್ರೀಧರ ಪರಿಮಾಳಾಚಾರ್ಯ ಆಗಮಿಸಲಿದ್ದಾರೆ. ಬೆಂಗಳೂರಿನ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್‌ನ ಮಹೋಹರ ನಾಯಕ, ಬೆಂಗಳೂರಿನ ಸ.ಅ.ಬುಡಾ ಉಪಾಧ್ಯಕ್ಷ, ಕರ್ನಾಟಕ ಇಂಜನಿಯರಿಂಗ್ ಸೇವಾ ಸಂಘದ ಎಂ.ವಿ. ಹಿರೇಮಠ ಅವರಿಗೆ ಸನ್ಮಾನಿಸಲಾಗುವುದು.

ಮಧ್ಯಾಹ್ನ 12ಕ್ಕೆ ಗಡಿಭಾಗದ ತಲ್ಲಣಗಳು ಕುರಿತು ವಿಚಾರಗೋಷ್ಠಿ ನಡೆಯಲಿವೆ. ಇದರ ಅಧ್ಯಕ್ಷತೆಯನ್ನು ಬೆಳಗಾವಿ ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ವಹಿಸಲಿದ್ದಾರೆ. ಅತಿಥಿಗಳಾಗಿ ಹಿರಿಯ ಸಾಹಿತಿ ಬಿ.ಎಸ್.ಗವಿಮಠ, ಡಿ.ಎಸ್.ಚೌಗುಲೆ, ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಆಗಮಿಸಲಿದ್ದು, ಪ್ರಕಾಶ ಗಿರಿಮಲ್ಲನವರ ಉಪನ್ಯಾಸ ನೀಡಲಿದ್ದಾರೆ.

Home add -Advt

ಮಧ್ಯಾಹ್ನ 2ಕ್ಕೆ ಕವಿಗೋಷ್ಠಿ ನಡೆಯಲ್ಲಿದ್ದು, ಇದರ ಅಧ್ಯಕ್ಷತೆಯನ್ನು ಡಾ. ಗುರುದೇವಿ ಹುಲ್ಲೆಪ್ಪನವರಮಠ ವಹಿಸಲಿದ್ದಾರೆ. ಅತಿಥಿಗಳಾಗಿ ಪ್ರೀಯಾ ಪುರಾಣಿಕ, ಜ್ಯೋತಿ ಬದಾಮಿ, ಸುಮಂಗಲಾ ಶಿಂತ್ರಿ ಆಗಮಿಸಲಿದ್ದಾರೆ. ಕವನ ವಾಚನವನ್ನು ಸುನಂದಾ ಎಮ್ಮಿ, ಆಶಾ ಪರೀಟ್, ಆನಂದ ಹಕ್ಕೆನ್ನವರ, ಅನ್ನಪೂರ್ಣ ಹಿರೇಮಠ, ಮಹಾದೇವಿ ಪಾಟೀಲ, ಮಹಾದೇವಿ ಬಿರಾದಾರ ನಡೆಸಿಕೊಡಲಿದ್ದಾರೆ.

ಸಂಜೆ 4ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಗಡಿ ಪ್ರಾಧಿಕಾರದ ಅಧ್ಯಕ್ಷ ಡಾ. ಸೋಮಶೇಖರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರಣ್ಯ ಇಲಾಖೆ, ಆಹಾರ ಮತ್ತು ನಾಗರಿಕ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ, ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಸಂಸದೆ ಮಂಗಲಾ ಅಂಗಡಿ, ಅಲ್ಪಸಂಖ್ಯಾತ ನಿಗಮ ಮಂಡಳಿಯ ಅಧ್ಯಕ್ಷ ಮುಕ್ತಾರ ಹುಸೇನ್ ಪಠಾಣ, ಕರ್ನಾಟಕ ಯುವ ವೇದಿಕೆಯ ರಾಜ್ಯಾಧ್ಯಕ್ಷ ಅನಂತಕುಮಾರ ಬ್ಯಾಕೋಡ, ಕವಿತಾ ಹಿರೇಮಠ ಆಗಮಿಸಲಿದ್ದಾರೆ. ದಿವ್ಯ ಸಾನಿಧ್ಯವನ್ನು ಹುಕ್ಕೇರಿ ಹಿರೇಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ ಎಂದು ಹುಕ್ಕೇರಿ‌ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದೆ.
ಮೇಕೆದಾಟು ಯೋಜನೆ; ಸಚಿವರೊಂದಿಗೆ ಸಿಎಂ ತುರ್ತು ಸಭೆ

Related Articles

Back to top button