ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಇಂದು ಗಾಂಧಿ ಭಾರತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಿಗ್ಗೆ ಸುವರ್ಣ ವಿಧಾನಸೌಧದ ಬಳಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ. ಬಳಿಕ ಸಿಪಿ ಎಡ್ ಮೈದಾನದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಆಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಗ್ರಾಮಾಂತರ, ಬೆಳಗಾವಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಇಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ