Politics

*ಅನಾರೋಗ್ಯ ನಿಮಿತ್ತ ಬೆಳಗಾವಿ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಗೈರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಸಮಾವೇಶ ನಡೆಯುತ್ತಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗೈರಾಗಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು. ಅನಾರೋಗ್ಯ ಕಾರಣಕ್ಕೆ ಕಾರ್ಯಕ್ರಮಕ್ಕೆ ಬರು ಸಾಧ್ಯವಾಗಿಲ್ಲ ಎಂದು ಹೇಳಿದರು.

Home add -Advt

ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಸೇರಿ ಹಲವರು ಆಗಮಿಸಿದ್ದಾರೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button